ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಭೈರಗೊಂಡನಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ದರ್ಶನ (23) ಎಂದು ಗುರುತಿಸಲಾಗಿದೆ. ಹೋಬಳಿ ಬೆವಿನಹಳ್ಳಿಯಲ್ಲಿ ಯುವತಿಯೊಬ್ಬಳನ್ನು ದರ್ಶನ ಗಣೇಶನ್ ಪ್ರೀತಿಸುತ್ತಿದ್ದ. ಇಬ್ಬರೂ ಪ್ರೀತಿಸಿ, ಒಟ್ಟಿಗೆ ಓಡಾಡಿಕೊಂಡಿದ್ದರು. ಯುವತಿ ಕಾಲೇಜಿನಲ್ಲಿ ಬಿಎ ಓದುತ್ತಿದ್ದಳು. ಮತ್ತು ಯುವಕ ಕೃಷಿ ಕಾರ್ಯ ಮಾಡಿಕೊಂಡಿದ್ದನು.ಓದಿನ ನಂತರ ನಾವು ಮದುವೆಯಾಗೋಣ ಎಂದು ದರ್ಶನ ಹೇಳಿದ್ದ. ಆದರೆ ಯುವತಿ ಇದಕ್ಕೆ ಒಪ್ಪದೇ ಆತನನ್ನು ಮದುವೆಯಾಗಲು ನಿರಾಕರಿಸಿದ್ದಳು.
ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿಷ ಸೇವಿಸಿದ್ದಾನೆ. ಆತನ ಪೋಷಕರು ಕೂಡಲೇ ಆತನನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.