ಬನ್ನೇರುಘಟ್ಟದಲ್ಲಿ ಆನೆ ಮೈತೊಳೆಯಲು ಕೆರೆಗೆ ಇಳಿದ ಈಜು ಬಾರದ ಯುವಕ ಸಾವು

ಬೆಂಗಳೂರು: ಆನೆ ಮೇಲೆ ಕುಳಿತು ಮೈತೊಳೆಯುವ ಸಂದರ್ಭದಲ್ಲಿ ಏಕಾಏಕಿ ಆನೆ ಆಳದ ನೀರಿನೊಳಗೆ ಇಳಿದ ಕಾರಣ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಬನ್ನೇರುಘಟ್ಟ ಜೈವಿಕ ಉದ್ಯಾನವನದ…

ಬೆಂಗಳೂರು: ಆನೆ ಮೇಲೆ ಕುಳಿತು ಮೈತೊಳೆಯುವ ಸಂದರ್ಭದಲ್ಲಿ ಏಕಾಏಕಿ ಆನೆ ಆಳದ ನೀರಿನೊಳಗೆ ಇಳಿದ ಕಾರಣ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ಮಾರ್ಗದ ಸೀಗೆಕಟ್ಟೆ ಕೆರೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ಮೂಲದ ಗೋಪಾಲ್ (20) ನೀರಿನಲ್ಲಿ ಮುಳುಗಿ ಮೃತಪಟ್ಟ ಕಾವಾಡಿಗ. 10 ವರ್ಷದ ಸಂಪತ್ ಹೆಸರಿನ ಆನೆಯನ್ನು 2 ವರ್ಷದಿಂದ ಗೋಪಾಲ್‌ ನೋಡಿಕೊಳ್ಳುತ್ತಿದ್ದ. ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಆನೆ ಮೈತೊಳೆಯುವಾಗ ಗಾಬರಿಗೊಂಡ ಆನೆ ಕೆರೆಯ ಒಳಭಾಗಕ್ಕೆ ಇಳಿದಿದೆ. ಈಜು ಬಾರದೆ ಆಳದ ನೀರಿನಲ್ಲಿ ಗೋಪಾಲ್ ಮುಳುಗುತ್ತಿರುವುದನ್ನು ಗಮನಿಸಿದ ಅಣ್ಣ ಕೃಷ್ಣಕುಮಾರ್, ಮಾವುತ ಸಂಜೇಶ್ ರಕ್ಷಿಸಲು ಹರಸಾಹಸಪಟ್ಟರೂ ಪ್ರಯೋಜನವಾಗಲಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯಪಾಲಕ ನಿರ್ದೇಶಕ ವಿಶಾಲ್ ಸೂರ್ಯಸೇನ್ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮುಳುಗು ತಜ್ಞರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಬೋಟ್ ಮೂಲಕ 3 ಘಂಟೆ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ಹೊರ ತೆಗೆದರು. ಕೆರೆಯಲ್ಲಿ ಎರಡು ಮೊಸಳೆಗಳಿದ್ದರೂ ಮೃತ ದೇಹಕ್ಕೆ ಹಾನಿ ಮಾಡಿಲ್ಲ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.