ದಾವಣಗೆರೆ: ದಾವಣಗೆರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯುವಕನೊಬ್ಬ ತನ್ನ ಕುಟುಂಬದೊಂದಿಗೆ ಉಕ್ಕಡಗಾತ್ರಿ ಕರಿಬಸವೇಶ್ವರ ರಥೋತ್ಸವಕ್ಕೆ ಬಂದಿದ್ದ. ಆದರೆ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ಈ ಘಟನೆ ನಡೆದಿದೆ.
ಮೃತ ಯುವಕನನ್ನು ಹಿರೇಕೆರೂರು ತಾಲೂಕಿನ ಹಡರಿಹಳ್ಳಿ ಗ್ರಾಮದ ನಾಗರಾಜ್ (26) ಎಂದು ಗುರುತಿಸಲಾಗಿದೆ.
ತುಂಗಭದ್ರಾ ನದಿಗೆ ಸ್ನಾನ ಮಾಡಲು ಹೋದಾಗ ನಾಗರಾಜ್ ತಮ್ಮ ಕುಟುಂಬದೊಂದಿಗೆ ಉಕ್ಕಡಗಾತ್ರಿ ಕರಿಬಸವೇಶ್ವರ ರಥೋತ್ಸವಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಸಿಲುಕಿ ನಾಗರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.