ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಈಗ ಉಲ್ಟಾ ಹೊಡೆದಿದ್ದಾರೆ.’
ನಾನು ಚಿನ್ನ ಕಳ್ಳ ಸಾಗಣೆ ಮಾಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಕಾರಾಗೃಹದ ಅಧಿಕಾರಿಗಳಿಗೆ ರನ್ಯಾ ರಾವ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಡಿಆರ್‌ಐ ಅಧಿಕಾರಿಗಳ ವಿಚಾರಣೆ ವೇಳೆ ಅಪರಿಚಿತರ ಸೂಚನೆಮೇರೆಗೆ ದುಬೈನಿಂದ ಚಿನ್ನ ತಂದಿದ್ದಾಗಿ ಒಪ್ಪಿಕೊಂಡಿದ್ದ ನಟಿ, ಈಗ ತಮ್ಮ ವರಸೆಯನ್ನೇ ಬದಲಿಸಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.