ಹೊಸಪೇಟೆ(ವಿಜಯನಗರ),ಜು.28: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯ ವತಿಯಿಂದ ಸೇನಾ ನೇಮಕಾತಿ ರ್ಯಾಲಿ(ಅಗ್ನಿಪಥ್ ಸೇನಾ ನೇಮಕಾತಿ)ಯನ್ನು ಆ.10ರಿಂದ ಆ.22ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ಸಂಬಂಧಿಸಿದ ನಿಯಮ-ನಿಬಂಧನೆಗಳು ಹಾಗೂ ಅರ್ಹತೆಗಳ ಕುರಿತ ಸಂಪೂರ್ಣ ವಿವರಗಳನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ vijayanagara.nic.in ಜಾಲತಾಣದಲ್ಲಿ ನೋಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.