ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆ

ದಾವಣಗೆರೆ: ಜಿಲ್ಲೆಯ ರೈತ ಸಾಗುವಳಿದಾರರಿಗೆ ಬಗರ್‌ಹುಕುಂ ಹಕ್ಕುಪತ್ರ ವಿತರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ (AIKKMS)ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ…

AIKKMS

ದಾವಣಗೆರೆ: ಜಿಲ್ಲೆಯ ರೈತ ಸಾಗುವಳಿದಾರರಿಗೆ ಬಗರ್‌ಹುಕುಂ ಹಕ್ಕುಪತ್ರ ವಿತರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ (AIKKMS)ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಹೌದು, ಜಿಲ್ಲೆಯಲ್ಲಿ 80 ವರ್ಷದಿಂದ ಭೂಹೀನ ಬಡ ರೈತರು, ಕೃಷಿ ಕಾರ್ಮಿಕರು ಕಂದಾಯ ಹಾಗೂ ಅರಣ್ಯದ ಕುರುಚಲುಗಿಡ, ಕಲ್ಲು ಭೂಮಿ ಇರುವ ಪ್ರದೇಶದಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದು, ಕೈಗಾರಿಕೆಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗದಿದ್ದರಿಂದ ಅನಿವಾರ್ಯವಾಗಿ ಜೀವನ ನಿರ್ವಹಣೆಗೆ ಸಾಗುವಳಿ ಮಾಡುತ್ತಿರುವುದು ಸರ್ಕಾರದ ಗಮನದಲ್ಲಿದ್ದು, ಉಳುಮೆಗೆ ಅವಕಾಶ ಕೊಟ್ಟಿರುವ ಸರ್ಕಾರಗಳು, ಹಕ್ಕುಪತ್ರ ನೀಡುತ್ತಿಲ್ಲ.

ಇನ್ನು, ಶಾಸನಬದ್ಧವಾಗಿ ಭೂಮಿಯ ಹಕ್ಕು ದೊರೆಯದ್ದರಿಂದಾಗಿ ಕೃಷಿ ಬೆಳೆ ಸಾಲ, ಕೃಷಿ ಪರಿಕರಗಳ ಮೇಲಿನ ಸಾಲ, ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಲ್ಪಾವಧಿ ಸಾಲವೂ ದೊರೆಯದಂತಾಗಿದೆ. ಇದುವರೆಗೆ ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದಿದ್ದರೂ ಹಕ್ಕುಪತ್ರ ನೀಡಲಾಗಿಲ್ಲ. ಇದರಿಂದ ಲಕ್ಷಾಂತರ ಭೂಹೀನರು, ಬಡ ರೈತರು ಅರ್ಜಿ ಹಾಕಲು ಕಾಯುತ್ತಿದ್ದರೂ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಟನಾಕಾರರು ದೂರಿದರು.

Vijayaprabha Mobile App free

ಹಕ್ಕುಪತ್ರ ನೀಡುವವರೆಗೆ ಅಂತಹ ರೈತರ ಜಮೀನುಗಳಿಗೆ ರಕ್ಷಣೆ ಕೊಡಬೇಕು. ಸಾಗುವಳಿದಾರರ ಮೇಲೆ ಅಧಿಕಾರಿಗಳು ನಡೆಸುತ್ತಿರುವ ಕಿರುಕುಳ ನಿಲ್ಲಿಸಬೇಕು. ಫಾರಂ ನಂ. 53ರಡಿ ಸಲ್ಲಿಸಲಾದ ಅರ್ಜಿಗಳಲ್ಲಿ ಬಹುತೇಕವು ತಿರಸ್ಕೃತಗೊಂಡಿದ್ದು ಅವನ್ನು ಮರು ಪರಿಶೀಲಿಸಬೇಕು ಎಂದು ಸಂಘಟನಾಕಾರರು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.