ಬೆಂಗಳೂರು: ಸಚಿವರಾದ ಆನಂದ್ ಸಿಂಗ್ ಮತ್ತು ಶಶಿಕಲಾ ಜೊಲ್ಲೆ ಅವರ ಉಸ್ತುವಾರಿ ಜಿಲ್ಲೆಗಳನ್ನು ಅದಲು ಬದಲು ಮಾಡಲಾಗಿದೆ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಹೌದು, ಸಚಿವ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲೆ ಮತ್ತು ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಸಚಿವ ಆನಂದ್ ಸಿಂಗ್ ಅವರು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹಾಗು ಶಶಿಕಲಾ ಜೊಲ್ಲೆ ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.