ದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ :ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ…

loan vijayaprabha news

ದಾವಣಗೆರೆ :ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅಕ್ಟೋಬರ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು ಆಧಾರ್ ಕಾರ್ಡ್‍ನಲ್ಲಿರುವಂತೆಯೇ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು. ನಿಗಮದಲ್ಲಿ ಒಂದು ಬಾರಿಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಮತ್ತು ಅವರ ಕುಟುಂಬದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಹಾಗೂ ಸಹಾಯವಾಣಿ ಸಂಖ್ಯೆ 08192-230934, 080-22374832, 9606066389 ಮತ್ತು 8824300400 ಗೆ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.