ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನ ಆರ್. ಕೆ. ವಿ. ವೈ ಯೋಜನೆಯಡಿಯಲ್ಲಿ ಕುರಿ ಮತ್ತು ಮೇಕೆ ಘಟಕ ( 10 + 01 ) ಅನುಷ್ಠಾನಕ್ಕಾಗಿ ನಿಗಮದ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಾನದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 24 ರೊಳಗಾಗಿ ತಾಲ್ಲೂಕು ಮಟ್ಟದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು / ಮುಖ್ಯ ಪಶುವೈದ್ಯಾಧಿಕಾರಿಗಳಿಂದ ದೃಢೀಕರಿಸಿ ನಿಗಮಕ್ಕೆ ಸಲ್ಲಿಸಬೇಕು.
ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.