ದಾವಣಗೆರೆ: ಎಸ್.ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.29 :ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ…

scholarship vijayaprabha

ದಾವಣಗೆರೆ ಜು.29 :ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾಡಳಿತ ಭವನ, ಹರಿಹರ ರಸ್ತೆ ಅಥವಾ ದೂ.ಸಂ 08192-26354 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.