ದಾವಣಗೆರೆ: ಸ್ಥಳೀಯ ಉದ್ಯುಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.16: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕೆರೆಬಿಳಚಿ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು…

rationers vijayaprabha

ದಾವಣಗೆರೆ ಆ.16: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕೆರೆಬಿಳಚಿ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕಾಗಿದ್ದು, ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಕೆರೆಬಿಳಚಿ ಗ್ರಾಮದ ವ್ಯಾಪ್ತಿಗೆ ಮಂಜೂರು ಮಾಡಲು ಉದ್ದೇಶಿಸಲಾಗಿರುವ ಹೊಸ ನ್ಯಾಯಬೆಲೆ ಅಂಗಡಿಗೆ 80-ಅಂತ್ಯೋದಯ, 400-ಬಿಪಿಎಲ್(ಅಕ್ಷಯ), ಎಪಿಎಲ್-30 ಸೇರಿದಂತೆ ಅಂದಾಜು ಒಟ್ಟು 510 ಪಡಿತರ ಚೀಟಿಗಳನ್ನು ನಿಯೋಜಿಸುವ ಉದ್ದೇಶ ಹೊಂದಲಾಗಿದ್ದು, ಈ ಹೊಸ ನ್ಯಾಯಬೆಲೆ ಅಂಗಡಿಗೆ ಒಂದು ತಿಂಗಳಿಗೆ ಪಡಿತರ ಎತ್ತುವಳಿಗೆ ಅವಶ್ಯವಿರುವ ಕನಿಷ್ಠ ಮೊತ್ತ ರೂ. 50,000.

Vijayaprabha Mobile App free

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ/ವ್ಯವಸಾಯ ಸೇವಾ ಸಹಕಾರ ಸಂಘ,ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್( ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೊಂದಾಯಿತವಾಗಿರಬೇಕಾಗಿದ್ದು, ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು) ಹಾಗೂ ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್, ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.