ದಾವಣಗೆರೆ ಸೆ.06 :2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಇಲಾಖೆಯ ವೆಬ್ ಸೈಟ್ http://dom.karnataka.gov.in ನಲ್ಲಿ ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250066ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.