ದಾವಣಗೆರೆ ಆ.29: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ನಗರದ ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷಾ ಐಚ್ಚಿಕ ವಿಷಯ) ಮುಗಿಸಿರುವ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಗಷ್ಟ್ 30 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182 220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.