ದಾವಣಗೆರೆ ಆ.30 : ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿ ನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆ.02 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.