ವಿಜಯನಗರ: ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ),ಜು.29: ಹೊಸಪೇಟೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕಿರುಸಾಲ ಮತ್ತು ಉದ್ಯೋಗಿನಿ (ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ಬ್ಯಾಂಕ್‍ಗಳ ಮೂಲಕ ಸಾಲ ಪಡೆಯುವ) ಯೋಜನೆಯಡಿಯಲ್ಲಿ ಎಲ್ಲಾ ಜಾತಿಯ ಮಹಿಳಾ ಫಲಾನುಭವಿಗಳಿಂದ…

application vijayaprabha news

ಹೊಸಪೇಟೆ(ವಿಜಯನಗರ),ಜು.29: ಹೊಸಪೇಟೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕಿರುಸಾಲ ಮತ್ತು ಉದ್ಯೋಗಿನಿ (ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ಬ್ಯಾಂಕ್‍ಗಳ ಮೂಲಕ ಸಾಲ ಪಡೆಯುವ) ಯೋಜನೆಯಡಿಯಲ್ಲಿ ಎಲ್ಲಾ ಜಾತಿಯ ಮಹಿಳಾ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೆಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆಯಲ್ಲಿ ಉದ್ಯೋಗ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲ ನೀಡುವ ಯೋಜನೆಯಾಗಿದ್ದು, ಉದ್ಯೋಗಿನಿ ಯೋಜನೆಗೆ-4 ಮತ್ತು ಕಿರುಸಾಲಕ್ಕೆ -1 ಗುರಿಗಳನ್ನು ನಿಗಧಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು, ಆಸಕ್ತರು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನೆ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೆ ಕಚೇರಿಗೆ ಆ.12ರೊಳಗಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹೊಸಪೇಟೆ ಇವರಿಗೆ ಸಂಪರ್ಕಿಸಬಹುದಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.