ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 13 ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹರಪನಹಳ್ಳಿಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಅ.06ರೊಳಗಾಗಿ ಆನ್‍ಲೈನ್ ವೆಬ್‍ಸೈಟ್ www.anganwadirecruit.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ,ಹರಪನಹಳ್ಳಿ ಇವರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.