ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಹುದ್ದೆಗಳ ವಿವರ ಹಾಗೂ ಅರ್ಜಿಯನ್ನು ಆನ್ಲೈನ್ ವೆಬ್ಸೈಟ್ www.anganwadirecruit.kar.nic.in ನಲ್ಲಿ ಅ.06ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.