ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನ

ಬಳ್ಳಾರಿ,ಜ.19: ಜಿಲ್ಲೆಯ ಡಾ.ಬಿ.ಅರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಜಯನಗರ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಒಬ್ಬ ಮಹಿಳಾ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ…

application vijayaprabha

ಬಳ್ಳಾರಿ,ಜ.19: ಜಿಲ್ಲೆಯ ಡಾ.ಬಿ.ಅರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಜಯನಗರ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಒಬ್ಬ ಮಹಿಳಾ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಒಬ್ಬರನ್ನು ಹಾಗೂ ಪರಿಶಿಷ್ಟ ಜಾತಿಯ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ 2 ವರ್ಷಗಳ ಅವಧಿಗೆ ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಫೆಬ್ರುವರಿ 02 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರು ಡಾ.ಬಿ.ಅರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಬಳ್ಳಾರಿ ಜಿಲ್ಲಾ ಕಚೇರಿಗೆ ಪ್ಲಾಟ್ ನಂ:07, ಸೆಂಟ್ ಜೋಸೆಫ್ ಬಾಲಕಿಯರ ಶಾಲೆ ಎದುರುಗಡೆ, ಬೆಳಗಲ್ಲು ಕ್ರಾಸ್ ಕಂಟೋನ್‍ಮೆಂಟ್ 583104 ಇಲ್ಲಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.08392-245377 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.