ದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ. ಅರ್ಹ ಕ್ರೀಡಾ ಪೋಷಕರಿಂದ…

application vijayaprabha news

ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ.

ಅರ್ಹ ಕ್ರೀಡಾ ಪೋಷಕರಿಂದ 2022-23ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 03 ರ ಒಳಗಾಗಿ ಕಛೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.