ಹೊಸಪೇಟೆ(ವಿಜಯನಗರ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 2021ರಿಂದ ಡಿಸೆಂಬರ್ 2022ರಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕ ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು 2023ನೇ ಜನವರಿ 04ರ ಸಂಜೆ 05.30ರೊಳಗಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಆವರಣ, ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097 ವಿಳಾಸಕ್ಕೆ ಕಳುಹಿಸಬಹುದು. ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 02 ಪ್ರಶಸ್ತಿಗಳನ್ನು ನೀಡಲಾಗುತ್ತದೆ, ಆಯ್ಕೆಯಾದ ಲೇಖಕರಿಗೆ 25 ಸಾವಿರ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತದೆ.
ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ www.kstacademy.in ವೀಕ್ಷಿಸಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯ ದೂರವಾಣಿ ಸಂಖ್ಯೆ:080-29721550/49ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.