ಸೇನಾ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ 

ಕಾರವಾರ: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು…

ಕಾರವಾರ: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯು ಕಾರವಾರ ತಾಲೂಕಿನ ಮಾಜಾಳಿ ‘ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ’ಯಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ನ. 22 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1 ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷಗಳ ಒಳಗಿರಬೇಕು. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರಬೇಕು. 

Vijayaprabha Mobile App free

ವಯೋಮಿತಿಯು ಜನ್ಮ ದಿನಾಂಕ ಮತ್ತು ವಯಸ್ಸು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 22 ನವೆಂಬರ್ 2024 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 22 ನವೆಂ 2004 ರಿಂದ 22 ನವೆಂಬರ್ 2007 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್-ಸೈಟ್ https://bcwd.karnataka.gov.in ನಿಂದ ಪಡೆಯಬಹುದು ಹಾಗೂ ದೂರವಾಣಿ ಸಂಖ್ಯೆ :08382-226588 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.