ಅರಸೀಕೆರೆ : ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಅರವಿಂದ್ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಪರ್ಯಾಯ ಕ್ರಮ ಕೈಗೊಳ್ಳುವಂತೆ ನಿನ್ನೆ ನಡೆದ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹೌದು, ಉಚ್ಚಂಗಿದುರ್ಗ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 12 ಗ್ರಾಮಗಳಿದ್ದು, ಸುಮಾರು 16 ಸಾವಿರ ಜನ ಸಂಖ್ಯೆಯಿದ್ದು, ಅಸ್ಪತ್ರೆಗೆ ನಿತ್ಯ ಸಾವಿರಕ್ಕೂ ಅಧಿಕ ಜನರು ಚಿಕಿತ್ಸೆ ಪಡೆಯಲು ಬರುತ್ತಿದ್ದು, ಅವರಲ್ಲಿ ಬಹುತೇಕರು ಗರ್ಭಿಣಿಯರೇ ಆಗಿರುತ್ತಾರೆ.
ಆದರೆ, ಕಳೆದ ಆರು ತಿಂಗಳಿನಿಂದ ಸೇವೆ ಸಲ್ಲಿಸುತ್ತಿರುವ ಡಾ. ಅರವಿಂದ ಕುಮಾರ್ ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಭೆಯಲ್ಲಿ ಸಾರ್ವಜನಿಕರು ಆರೋಪಿಸಿದ ಪರಿಣಾಮ, ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ವೈದ್ಯರ ವರ್ಗಾವಣೆಗೆ ತೀರ್ಮಾನಿಸಲಾಗಿದೆ.