ದಾವಣಗೆರೆ: ಜಿಲ್ಲೆಯಲ್ಲಿ 1.6 ಮಿ.ಮೀ ಸರಾಸರಿ ಮಳೆ; ಇಲ್ಲಿದೆ ತಾಲ್ಲೂಕುವಾರು ಮಳೆ ವಿವರ

ದಾವಣಗೆರೆ ಸೆ.03: ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ…

rain-vijayaprabha-news

ದಾವಣಗೆರೆ ಸೆ.03: ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ ಹಾಗೂ ವಾಸ್ತವ ಮಳೆ 0.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ ಹಾಗೂ ವಾಸ್ತವ ಮಳೆ 7.0 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 2.0 ಮಿ.ಮೀ ಹಾಗೂ ವಾಸ್ತವ ಮಳೆ 0.3 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 1.5 ಮಿ.ಮೀ ಹಾಗೂ ವಾಸ್ತವ ಮಳೆ 0.3 ಮಿ.ಮೀ, ಜಗಳೂರು ವಾಡಿಕೆ ಮಳೆ 0.9 ಮಿ.ಮೀ ಹಾಗೂ ವಾಸ್ತವ ಮಳೆ 1.1 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 0.2 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾಮನೆ ಭಾಗಶ: ಹಾನಿಯಾಗಿದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 06 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 06 ಪಕ್ಕಾ ಮನೆ ತೀವ್ರ ಹಾನಿಯಾಗಿದೆ. 01 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.