ಶಿರಸಿ: ತಾಲ್ಲೂಕಿನ ಬನವಾಸಿ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದ್ರಮ್ಮ(49) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ.
ಇಂದ್ರಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಡಿದಿದೆ. ಕೂಡಲೇ ಅವರನ್ನು ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅಲ್ಲಿಂದ ಅವರನ್ನು ಶಿರಾಳಕೊಪ್ಪದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಇಂದ್ರಮ್ಮ ಅವರಿಗೆ ಹಾವಿನ ವಿಷ ಏರಿಕೆಯಾಗಿ ಆಸ್ಪತ್ರೆ ತಲುಪುವ ವೇಳೆಗಾಗಲೇ ಕೊನೆಯುಸಿರೆಳೆದಿದ್ದಾರೆ. ಮಹಿಳೆ ಸಾವಿನ ಹಿನ್ನಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಬನವಾಸಿ ಠಾಣೆಯ ಪಿಎಸ್ಐ ಚಂದ್ರಕಲಾ ಪತ್ತಾರ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.