ಬೆಳಕು ಯೋಜನೆ ಅಡಿ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜ.24: ಬಳ್ಳಾರಿ ಜಿಲ್ಲೆಯ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕವಿಲ್ಲದೆ ವಾಸವಿರುವ ಮನೆಗಳಿಗೆ ಬೆಳಕು ಯೋಜನೆ ಅಡಿ(ಎಲ್.ಟಿ.-2 ಜಕಾತಿ)ಯಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿಯ ಜೆಸ್ಕಾಂನ ಕಾರ್ಯ ಮತ್ತು ಪಾಲನಾ ವಿಭಾಗದ…

electricity vijayaprabha

ಬಳ್ಳಾರಿ,ಜ.24: ಬಳ್ಳಾರಿ ಜಿಲ್ಲೆಯ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕವಿಲ್ಲದೆ ವಾಸವಿರುವ ಮನೆಗಳಿಗೆ ಬೆಳಕು ಯೋಜನೆ ಅಡಿ(ಎಲ್.ಟಿ.-2 ಜಕಾತಿ)ಯಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿಯ ಜೆಸ್ಕಾಂನ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಎಂಜನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಕ್ತ ದಾಖಲೆಗಳೊಂದಿಗೆ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.31 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಜೆಸ್ಕಾಂ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.