ದಾವಣಗೆರೆ ಸೆ.21: ಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಟ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ.
ಅಣೆಕಟ್ಟು ಸುರಕ್ಷತೆಯ ದೃಷ್ಟಿಯಿಂದ ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್ ವೇ ಗೇಟ್ ಮುಖಾಂತರ ನದಿಗೆ, ಭದ್ರಾ ಬಲದಂಡೆ ನಾಲೆ, ಎಡದಂಡ ನಾಲೆಗಳಲ್ಲಿ ಹೆಚ್ಚುವರಿ ನೀರನ್ನು ಹರಿಯ ಬಿಡಲಾಗುವುದು.
ಕಾಲುವೆ ಮತ್ತು ನದಿ ಪಾತ್ರಗಳಲ್ಲಿ ಸಾರ್ವಜನಿಕರು ದನಕರುಗಳನ್ನು ತೊಳೆಯುವುದು, ರೈತರು ತಿರುಗಾಡುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ.
ನದಿಯ ಪಾತ್ರದಲ್ಲಿರುವ ಪ್ರದೇಶದ ಗ್ರಾಮಸ್ಥರಿಗೆ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಸೂಚಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರವರು ತಿಳಿಸಿದ್ದಾರೆ.