ಹರಪನಹಳ್ಳಿ: ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿದ್ದು, ಅವುಗಳನ್ನು ಉಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಇಜಾರಿ ಶಿರಸಪ್ಪ ವೃತ್ತದಲ್ಲಿ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ʻಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕುʼ ಎಂದು ಒತ್ತಾಯಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.