ಭಟ್ಕಳ: ಮಹಿಳೆಯೋರ್ವಳು ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮುಂಡಳ್ಳಿಯ ನೀರಗದ್ದೆ ನಿವಾಸಿ ಫೆಲ್ಸಿಟಾ ಡಿಸೋಜಾ(28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ.
ಫೆಲ್ಸಿಟಾ ಕಳೆದೆರಡು ವರ್ಷಗಳ ಹಿಂದೆ ನೀರಗದ್ದೆ ಗ್ರಾಮದ ಜೋಯಲ್ ಎಂಬುವವರೊಂದಿಗೆ ವಿವಾಹವಾಗಿದ್ದಳು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಈಕೆ, ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದು, ಔಷಧೋಪಚಾರದಲ್ಲಿದ್ದಳು. ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಎದೆ ಹಿಡಿದುಕೊಂಡೇ ಕುಸಿದು ಬಿದ್ದಿದ್ದಾಳೆ.
ತಕ್ಷಣ ಗಂಡ ಜೋಯಲ್, ಪತ್ನಿ ಫೇಲ್ಸಿಟಾಳನ್ನು ಭಟ್ಕಳ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯನ್ನು ಪರೀಕ್ಷಿಸಿದ ವೈದ್ಯರು, ಆಸ್ಪತ್ರೆಗೆ ಕರೆತರುವ ಮುನ್ನವೇ ಮಹಿಳೆ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಮಹಿಳೆ ಸಾವಿನ ಹಿನ್ನಲೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment