ಹೊನ್ನಾಳಿ: ಡಿ.ಕೆ ಶಿವಕುಮಾರ್ ಹಾಗೂ ನಲ್ಪಡ್ ಕ್ಷೇಮೆ ಕೋರುವಂತೆ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಹೊನ್ನಾಳಿ: ಹಿಂದುಳಿದ ವರ್ಗದ ನಾಯಕರು ಹಿರಿಯ ಸಚಿವರಾದ ಮಾನ್ಯ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗುಂಡಾಗಿರಿ ವರ್ತನೆ ಪ್ರದರ್ಶಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವರ್ತನೆಯನ್ನು ಖಂಡಿಸಿ ಹಾಗೂ ನಿಖಟಪೂರ್ವ ಮುಖ್ಯಮಂತ್ರಿಗಳಾದ…

ಹೊನ್ನಾಳಿ: ಹಿಂದುಳಿದ ವರ್ಗದ ನಾಯಕರು ಹಿರಿಯ ಸಚಿವರಾದ ಮಾನ್ಯ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗುಂಡಾಗಿರಿ ವರ್ತನೆ ಪ್ರದರ್ಶಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವರ್ತನೆಯನ್ನು ಖಂಡಿಸಿ ಹಾಗೂ ನಿಖಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ ನವರ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ರಾಜ್ಯ ಕಾಂಗ್ರೇಸ್ ಯುವ ಮೋರ್ಚಾ ಅಧ್ಯಕ್ಷ ನಲ್ಪಡ್ ವಿರುದ್ಧ ಹಾಗೂ ಹಿಜಾಬ್ ವಿಚಾರದಲ್ಲಿ ಕೋಮುಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಹೊನ್ನಾಳಿ-ನ್ಯಾಮತಿ ಬಿಜೆಪಿ ಮಂಡಲ ಯುವ ಮೋರ್ಚಾವತಿಯಿಂದ ಯುವ ಮೋರ್ಚಾ ಅಧ್ಯಕ್ಷರಾದ ವಿಕಾಸ್ ಅವರ ನೇತೃತ್ವದಲ್ಲಿ ಹೊನ್ನಾಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನೆಡೆಸಿ ಡಿ.ಕೆ ಶಿವಕುಮಾರ್ ಹಾಗೂ ನಲ್ಪಡ್ ಅವರು ಕ್ಷೇಮೆ ಕೋರುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಹೊನ್ನಾಳಿ ಮಂಡಲ ಅಧ್ಯಕ್ಷರು, ಪಕ್ಷದ ತಾಲ್ಲೂಕು & ಜಿಲ್ಲಾ ಪದಾಧಿಕಾರಿಗಳು, ಪುರಸಭೆ ಅಧ್ಯಕ್ಷರು & ಸದಸ್ಯರು, ನಿಗಮ ಮಂಡಳಿಗಳ ನಿರ್ದೇಶಕರು ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.