ದಾವಣಗೆರೆ ಆ.03 :ತಾಯಿಯ ಎದೆ ಹಾಲು ಅಮೃತವಿದಂತೆ, ಮಗು ಹುಟ್ಟಿದ ಒಂದು ಗಂಟೆಯೋಳಗೆ ಮಗುವಿಗೆ ಹಾಲುಣಿಸಲು ಪ್ರಾರಂಭಿಸಬೇಕು ಎಂದು ಕಕ್ಕರುಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೆಂಕಟೇಶ್ ಎಲ್.ಡಿ ತಿಳಿಸಿದರು.
ಬುದುವಾರ ದಾವಣಗೆರೆ ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ಆಯೋಜಿಸಿದ “ಸ್ತನ್ಯ ಪಾನ ಸಪ್ತಾಹ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಯಿಯ ಎದೆ ಹಾಲಿನಲ್ಲಿ ಶಿಶುವಿನ ಸದೃಢ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳು , ವಿಟಮಿನ್, ಖನಿಜಾಂಶಗಳು ಅಡಕವಾಗಿದೆ. ಸ್ತನ್ಯಪಾನ ನವಜಾತ ಶಿಶುಗಳನ್ನು ಅನಾರೋಗ್ಯದಿಂದ ರಕ್ಷಿಸುವುದರ ಜೊತೆಗೆ ವಿಶೇಷವಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಹೆಚ್ಚು ಪರಿಣಾಮಕಾರಿಯಾಗಿ ಪ್ರತಿರಕ್ಷಣಾ ವಾಹಕಗಳನ್ನು ತಾಯಿಯಿಂದ ನೇರವಾಗಿ ಪಡೆಯುವುದರ ಮೂಲಕ ಮಗುವಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಾರ್ವತ್ರಿಕ ಲಸಿಕಾ ಕರಣ ಹಾಗೂ ಸ್ವಚ್ಛತೆ ಬಗ್ಗೆ ಕುಟುಂಬ ಕಲ್ಯಾಣದ ಯೋಜನೆಯ ಬಗ್ಗೆ ಪೌಷ್ಟಿಕ ಆಹಾರದ ಬಗ್ಗೆ ಹೆಚ್ಚು ಗಮನ ಕೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಅನಿತಾ ಕೆ.ಎಂ, ಸಿ.ಎಚ್.ಒ ಸೈಯದ್ ಶಬಾನ, ಎಸ್.ಹೆಚ್ ರಾಜೇಶ್, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.