ವಿಜಯನಗರ ಜಿಲ್ಲೆಯ ವಿವಿಧೆಡೆ ಆ.03 ಮತ್ತು ಆ.04ರಂದು ಬಸ್ ಸಂಚಾರ ವ್ಯತ್ಯಯ

ಹೊಸಪೇಟೆ(ವಿಜಯನಗರ)ಆ.02: ಆ.03ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ಕರಾರು ಒಪ್ಪಂದದ ಮೇಲೆ ವಾಹನಗಳನ್ನು ಒದಗಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧಡೆ ಬಸ್ ಸಂಚಾರದಲ್ಲಿ ಆ.03 ಮತ್ತು…

ksrtc vijayaprabha

ಹೊಸಪೇಟೆ(ವಿಜಯನಗರ)ಆ.02: ಆ.03ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ಕರಾರು ಒಪ್ಪಂದದ ಮೇಲೆ ವಾಹನಗಳನ್ನು ಒದಗಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧಡೆ ಬಸ್ ಸಂಚಾರದಲ್ಲಿ ಆ.03 ಮತ್ತು ಆ.04ರಂದು ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಹರಪನಹಳ್ಳಿ ತಾಲೂಕುಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್‍ಗಳ ದೈನಂದಿನ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಎರಡು ದಿನಗಳ ಮಟ್ಟಿಗೆ ವ್ಯತ್ಯಯವಾಗಲಿದ್ದು ಈ ಭಾಗಗಳ ಪ್ರಯಾಣಿಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.