ಚಿತ್ರದುರ್ಗ: ವ್ಯಕ್ತಿಯೊಬ್ಬ ಪೊಲೀಸರ ವೇಷ ಧರಿಸಿ ಮನೆಯಲ್ಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಾಸವಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಉದ್ಯಮಿ ಲತಾ ಎಂಬುವವರ ಮನೆಗೆ ನುಗ್ಗಿ ಚಿನ್ನದ ಆಭರಣಗಳನ್ನು ದೋಚಿದ್ದಾರೆ.
ಮನೆಯಿಂದ 300 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಅವರು ಚಿನ್ನವನ್ನು ಕದ್ದು, ಬಂಧಿಸುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಕಾರಿನಲ್ಲಿ ಬಂದ ನಾಲ್ವರು ದರೋಡೆಕೋರರು ಈ ಕೃತ್ಯವನ್ನು ಎಸಗಿದ್ದಾರೆ. ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.