ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪಚುನಾವಣೆ; ನಾಮಪತ್ರ ಸಲ್ಲಿಸಲು ಅ.18ರಂದು ಕೊನೆಯ ದಿನ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ 22-ದುಗ್ಗಾವತಿ ಹಾಗೂ ಹಡಗಲಿ ತಾಲೂಕಿನ ಮಾಗಳ ಗ್ರಾಮ ಪಂಚಾಯತಿಗಳ ತಲಾ 01 ಸದಸ್ಯ ಸ್ಥಾನವು ವಿವಿಧ ಕಾರಣಗಳಿಂದ ತೆರವಾಗಿದ್ದು, ಈ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವಿಜಯನಗರ ಜಿಲ್ಲಾಧಿಕಾರಿ…

election-vijayaprabha-news

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ 22-ದುಗ್ಗಾವತಿ ಹಾಗೂ ಹಡಗಲಿ ತಾಲೂಕಿನ ಮಾಗಳ ಗ್ರಾಮ ಪಂಚಾಯತಿಗಳ ತಲಾ 01 ಸದಸ್ಯ ಸ್ಥಾನವು ವಿವಿಧ ಕಾರಣಗಳಿಂದ ತೆರವಾಗಿದ್ದು, ಈ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಹರಪನಹಳ್ಳಿ ತಾಲೂಕಿನ 22-ದುಗ್ಗಾವತಿ ಗ್ರಾಮ ಪಂಚಾಯಿತಿಯ 03-ದುಗ್ಗಾವತಿ ಕ್ಷೇತ್ರದ 01 ಸ್ಥಾನಕ್ಕೆ ಹಾಗೂ ಹಡಗಲಿ ತಾಲೂಕಿನ ಮಾಗಳ ಗ್ರಾಮ ಪಂಚಾಯತಿಯ 05-ಮಾಗಳ ಕ್ಷೇತ್ರದ 01 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಅ.18ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಅ.19ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಉಮೇದುವಾರಿಕೆಯನ್ನು ಹಿಂಪಡೆಯಲು ಅ.21ರಂದು ಕಡೆಯದಿನವಾಗಿದ್ದು, ಮತದಾನವು ಅ.28ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಮತ ಎಣಿಕೆಯು ಅ.31ರಂದು ಬೆಳಗ್ಗೆ 8ರಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.