ವಿಜಯನಗರ: ವಿಜ್ಞಾನ ಮತ್ತು ಎಂಜಿನಿಯರಿಂಗ್‍ನಲ್ಲಿ ಪಿಎಚ್‍ಡಿ ಸಂಶೋಧನೆಗೆ ಅರ್ಜಿ ಆಹ್ವಾನ

ಹೊಸಪೇಟೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಎಚ್.ಡಿ. ಸಂಶೋಧನೆಗೆ “ಕರ್ನಾಟಕ ಡಿ.ಎಸ್.ಟಿ -ಪಿ.ಹೆಚ್.ಡಿ ಶಿಷ್ಯವೇತನ” ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಹಕ…

Government of Karnataka

ಹೊಸಪೇಟೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಎಚ್.ಡಿ. ಸಂಶೋಧನೆಗೆ “ಕರ್ನಾಟಕ ಡಿ.ಎಸ್.ಟಿ -ಪಿ.ಹೆಚ್.ಡಿ ಶಿಷ್ಯವೇತನ” ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.

ಈ ಯೋಜನೆಯಡಿ 2022-23ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 12ರ ಸಂಜೆ 5ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವ ಲಿಂಕ್‍ಗಾಗಿ http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.