ದಾವಣಗೆರೆ: ರಾಜ್ಯದಲ್ಲಿ ಇತ್ತೀಚೆಗೆ ಕೋಳಿ ಶೀತ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಗವನ್ನು ತಡೆಗಟ್ಟುವ ಮತ್ತು ನಿಯಂತ್ರಿಸುವ ಸಲುವಾಗಿ ಸಾರ್ವಜನಿಕರು ರೋಗಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಕಂಡುಬಂದರೆ ಇಲಾಖೆಗೆ ತಿಳಿಸಬೇಕು.
ಶಂಕಾಸ್ಪದವಾಗಿ ಸತ್ತ ಹಿತ್ತಲ ಕೋಳಿಗಳು, ವನ್ಯ ಪಕ್ಷಿಗಳ ಮಾಹಿತಿಯನ್ನು ಕೂಡಲೇ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ದೂ.ಸಂಖ್ಯೆ 9916860163 ಗೆ ಕರೆಮಾಡಿ ಮಾಹಿತಿ ನೀಡುವಂತೆ ಇಲಾಖೆಯ ಉಪನಿರ್ದೇಶಕ ಡಾ; ಮಹೇಶ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.