ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಭಾನುವಾರ (ಮಾ09) ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಗೋಪಲ್ಲಿ ಗೇಟ್ ಬಳಿ ಭಾನುವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸುಟ್ಟು ಸಾವನ್ನಪ್ಪಿದ್ದರೆ, ಇತರ ಮೂವರು ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ, ಆದರೆ ಕೆಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಮತ್ತು ಕೆಂಚರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.