ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಆರೀಪ್ ವಡ್ಡೋಡಗಿ (35), ಮೈಬೂಬ್‌ಸಾಬ್ ಕರಜಗಿ (65) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರಾಗಿದ್ದಾರೆ. ಬೈಕ್ ಸವಾರರು ಹೂವಿನ ಹಿಪ್ಪರಗಿಯಿಂದ ದೇವರಹಿಪ್ಪರಗಿಗೆ ಬರುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧು, ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.