ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶ

ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.…

ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಿಂದ ಹೊಸಪೇಟೆಗೆ ಅಡಿಕೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಜಿಎಸ್‌ಟಿ ಅಧಿಕಾರಿ ಹಮೀದ್ ಸಿದ್ದಿಖಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಡಿಎಆರ್ ಮೈದಾನಕ್ಕೆ ಲಾರಿಗಳನ್ನು ತಂದು ದಾಖಲೆ ಪರಿಶೀಲಿಸಲಾಗಿದೆ.

ತಿಂಗಳ ಹಿಂದೆ ಅಡಿಕೆ ವ್ಯಾಪಾರಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಾಗ ಜಿ.ಎಸ್.ಟಿ. ಪಾವತಿಸದೆ ವಹಿವಾಟು ನಡೆಸಿದ್ದೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಸಂದರ್ಭದಲ್ಲಿ ಜಿ.ಎಸ್‌.ಟಿ. ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಸಮರ್ಪಕವಾದ ದಾಖಲೆ ಸಲ್ಲಿಸದ ಕಾರಣ ಲಾರಿಗಳನ್ನು ಅಡಿಕೆ ಸಮೇತ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.