ಚಿತ್ರದುರ್ಗ: ಲಾರಿ ಹಾಗೂ ಎರಡು ಕಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಎಮ್ಮೆಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಬಲಿಯಾಗಿವೆ.
ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.