ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವಿನ ಪ್ರಕರಣಗಳು ಮುಂದುವರಿದಿವೆ. ಈ ಬೆನ್ನಲ್ಲೇ ತುಮಕೂರಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಪುರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ 16 ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿ ರಾಹುಲ್ ಕುಸಿದು ಬಿದ್ದಿದ್ದಾನೆ. ಅವರನ್ನು ಹುಳಿಯಾರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.
ಆದರೆ, ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ರಾಹುಲ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ರಾಹುಲ್ ಭೈರಾಪುರ ಗ್ರಾಮದ ಜಯರಾಮ್ ಅವರ ಮಗನಾಗಿದ್ದ.