ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಉತ್ತರಹಳ್ಳಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.
ಉತ್ತರಹಳ್ಳಿಯ ಮಧು ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಕಾಂಕ್ರೀಟ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸಿಫ್ ಅಹ್ಮದ್ ಮತ್ತು ಶಬಾನಾ ಬೇಗಂ ಮೃತರು.
ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಕ್ರೀಟ್ ಲಾರಿ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.