ದಾವಣಗೆರೆ: ನಗರದಲ್ಲಿನ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಖಾಸಗೀಕರಣಕ್ಕೆ ಹಾಕಿದ ಸರ್ಕಾರ ನೀತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ದಾವಣಗೆರೆ ಬಂದ್ ಗೆ ಕರೆ ನೀಡಿದೆ.
ಹೌದು, ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಉಳಿವು, ಪೇಮೆಂಟ್ ಸೀಟ್ ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಅಕ್ಟೋಬರ್ 16 ರಂದು ಇಂದು ದಾವಣಗೆರೆ ಬಂದ್ ಕರೆ ನೀಡಿದ್ದು, ಬೆಳಗ್ಗೆಯೇ ರಸ್ತೆಗಿಳಿದ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!
ಇದರಿಂದ ಬೆಳಗ್ಗೆ 5 ಗಂಟೆಯಿಂದಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್, ಜಯದೇವ ಸರ್ಕಲ್ , ಹೊಸ ಬಸ್ ಸ್ಟ್ಯಾಂಡ್, ಪಿಬಿ ರಸ್ತೆಯಲ್ಲಿ ನಡೆಸಿದರು. ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಥ್ ನೀಡಿವೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.