ದಾವಣಗೆರೆ.ಅ.1.: ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಾನಗರ ಪಾಲಿಗೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 2 ರಂದು ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ. ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ನೇರೆವೆರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ವಚ್ಛತಾ ಮಾನವ ಸರಪಳಿ ರೂಪಿಸಿ, ಗಾಂಧಿಯವರ ಬಗ್ಗೆ ಚಿಂತನ ಬಗ್ಗೆ ಭೋಧಿಸಿ ನಂತರ ಪೊರಕೆ ಹಿಡಿದು ಜಿಲ್ಲಾ ನ್ಯಾಯಾಲಯಗಳ ಆವರಣವನ್ನು ಸ್ವಚ್ಛಗೊಳಿಸಲಾಯಿತು.
ಈ ಸಂಧರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆÀಣ್ಣವರ್, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾ ಅಣ್ಣಯ್ಯನವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣ್‍ಕುಮಾರ್ ಎಲ್.ಎಚ್, ನಗರ ಘಟಕದ ಎಲ್ಲಾ ನ್ಯಾಯಾಧೀಶರು, ನ್ಯಾಯಾಲಯಗಳ ಸಿಬ್ಬಂದಿ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.