ನಿಮ್ಮ ಹಾಗೆ ಜಿಲ್ಲಾಧಿಕಾರಿಯಾಗಬೇಕು ಎಂದ ವಿಧ್ಯಾರ್ಥಿನಿಗೆ ತಮ್ಮ ಕುರ್ಚಿಯಲ್ಲಿ ಕೂರಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಪ್ರೇರಣೆ ನೀಡಿದ್ದಾರೆ.
ಯಲ್ಲಾಪುರದ 8ನೇ ತರಗತಿ ವಿಧ್ಯಾರ್ಥಿನಿ ಸುದೀಪ್ತ ನಾನೂ ಕೂಡ ನಿಮ್ಮ ಹಾಗೆ ಡಿಸಿ ಆಗಬೇಕು ಎಂದಾಗ, ನಿನ್ನ ಕನಸಿಗೆ ನನ್ನಿಂದ ಈಗಿನಿಂದಲೇ ಪ್ರೇರಣೆ ಸಿಗಲಿ ಎಂದು ತಾವು ಕುಳಿತಿದ್ದ ಕುರ್ಚಿಯಿಂದ ಕೆಳಗಿಳಿದು ಜಿಲ್ಲಾಧಿಕಾರಿ ಕುರ್ಚಿಯಲ್ಲಿ ಕೂರಿಸಿ ಅಪರೂಪದ ಗಳಿಗೆಗೆ ಜಿಲ್ಲಾಧಿಕಾರಿ ಲಕ್ಷ್ಮೀ ಸಾಕ್ಷಿಯಾಗಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.