ಬೆಳಗಾವಿ: ಕೆಲವರಿಂದ ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಕಿರುಕುಳವನ್ನು ಸಹಿಸಲು ಸಾಧ್ಯವಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತನನ್ನು ರಫೀಕ್ ಬಾಬುಸಾಬ್ ತಿಗಾಡಿ (38) ಎಂದು ಗುರುತಿಸಲಾಗಿದೆ. ರಫೀಕ್ ತನ್ನ ಸಹೋದರನೊಂದಿಗೆ ಜೀವನೋಪಾಯಕ್ಕಾಗಿ ಮಿತಿಮೀರಿದ ಬಡ್ಡಿದರದಲ್ಲಿ ವಿವಿಧ ಜನರಿಂದ ವಾಹನಕ್ಕಾಗಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.
ಸಾಲ ಮರುಪಾವತಿಗಾಗಿ ಆತನಿಗೆ ಕಿರುಕುಳ ನೀಡಲಾಗುತ್ತಿತ್ತು. ಮತ್ತು ದಿನನಿತ್ಯದ ಜೀವನ ಸಾಗಿಸಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿ ಆತ ಸರಕು ವಾಹನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೈಲಹೊಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.