ಮುಜರಾಯಿ ಇಲಾಖೆ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದೆ.
ಇ-ಪ್ರಸಾದ ಸೇವೆ ಮೂಲಕ ರಾಜ್ಯದ 400 ದೇಗುಲಗಳ ಪ್ರಸಾದ 15 ದಿನಗಳಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ.
ದೂರದ ದೇವಸ್ಥಾನಗಳಿಗೆ ಹೋಗಿ, ಜನರ ದಟ್ಟಣೆಯ ನಡುವೆ ದೇವರ ದರ್ಶನ ಪಡೆಯುವುದು ಕಷ್ಟ. ಈ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಈ ಪ್ರಯೋಗ ನಡೆಸಿದೆ.
ಈ ಹಿಂದೆ ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದ ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗ ಆರಂಭಿಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.