ವಿಜಯನಗರ/ಬಳ್ಳಾರಿ,ಜ.19: ಹೊಸಪೇಟೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಬರುವ 110/11ಕೆ.ವಿ. ಕಮಲಾಪುರ, ತೋರಣಗಲ್ಲು, ಮೆಟ್ರಿ ಮತ್ತು 33/11ಕೆ.ವಿ ಹೊಸಪೇಟೆ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ 110ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತಾಗಿ ಜಂಗಲ್ ಕಟಿಂಗ್ ಕಾಮಗಾರಿ ಇರುತ್ತದೆ.
ಆದ ಕಾರಣ ಜನವರಿ 20 ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಮಲಾಪುರ, ಮೆಟ್ರಿ ಮತ್ತು ಹೊಸಪೇಟೆ ಗ್ರಾಮೀಣ ಶಾಖಾ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಎಲ್ಲ ರೈತಬಾಂಧವರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಜೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.