ವೈ ಡಿ ಅಣ್ಣಪ್ಪ ಸಮಾಜಮುಖಿ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹರಪನಹಳ್ಳಿ ತಾಲ್ಲೂಕಿನ 2022 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವೈ.ಡಿ ಅಣ್ಣಪ್ಪ ಸಮಾಜಮುಖಿ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಹೌದು, ಎಸ್.ಎಸ್.ಎಲ್.ಸಿ…

ಹರಪನಹಳ್ಳಿ: ಹರಪನಹಳ್ಳಿ ತಾಲ್ಲೂಕಿನ 2022 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವೈ.ಡಿ ಅಣ್ಣಪ್ಪ ಸಮಾಜಮುಖಿ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೌದು, ಎಸ್.ಎಸ್.ಎಲ್.ಸಿ ಯಲ್ಲಿ 600 ಕ್ಕೂ ಹೆಚ್ಚು ಅಂಕ, ಹಾಗೂ ಪಿ.ಯು.ಸಿ 575 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಕೂಡಲೇ ಹೆಸರನ್ನು ನೋಂದಾಯಿಸಲು ಕೋರಲಾಗಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಇಂದು ಬೆಳಿಗ್ಗೆ 10.30 ಗಂಟೆಗೆ ಹರಪನಹಳ್ಳಿಯ ದೇವರ ತಿಮಲಾಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

Vijayaprabha Mobile App free

ಈ ವಿಶೇಷ ಕಾರ್ಯಕ್ರಮಕ್ಕೆ ಕೇಂದ್ರ ಬಿಂದುವಾಗಿ ಕರ್ನಾಟಕ ಜನಪದ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಮಂಜಮ್ಮ ಜೋಗತಿಯವರು ಭಾಗವಹಿಸಲಿದ್ದಾರೆ.

ವಿಶೇಷ ಸೂಚನೆ:~ SSLC ಮತ್ತು PUC ಯಲ್ಲಿ ಮೇಲ್ಕಾಣಿಸಿದ ಅಂಕಗಳಲ್ಲಿ ತೇರ್ಗಡೆಯಾದ ವಿಧ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಹಾಗೂ ಅಂಕಪಟ್ಟಿ (ಮಾರ್ಕ್ಸ್ ಕಾರ್ಡ್) ಈ ಕೆಳ ಕಾಣಿಸಿದ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಹಾಗೂ ದೂರವಾಣಿ ಕರೆಯ ಮೂಲಕ ನೋಂದಣಿ ಮಾಡಬೇಕಾಗಿ ವಿನಂತಿ…
ಮೊಬೈಲ್ ಸಂಖ್ಯೆ:~9686194495

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.