ದಾವಣಗೆರೆ: ಆಧಾರ ಸಾಲ ಯೋಜನೆಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಆ.18 :2022-23ನೇ ಸಾಲಿನ ಇಲಾಖೆಯ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ಯೋಜನೆಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ…

Aadhaar Loan Scheme

ದಾವಣಗೆರೆ ಆ.18 :2022-23ನೇ ಸಾಲಿನ ಇಲಾಖೆಯ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ಯೋಜನೆಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಷ್ಟ್ 20 ರಿಂದ ಆಗಷ್ಟ್ 31 ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಆಸಕ್ತರು ಈ ಕೆಳಕಂಡ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ(MRW) ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿಧ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಾದ ಹೊನ್ನಾಳಿ ಶೈಲಜಾ ಕೆ.ಎಂ. 9886366809, ಚನ್ನಗಿರಿ ಕೆ ಸುಬ್ರಮಣ್ಯಂ 9945738141, ಜಗಳೂರು ಎಂ.ಕೆ ಶಿವನಗೌಡ 9902105734, ಹರಿಹರ ಶಶಿಕಲಾ ಟಿ 9945458058, ದಾವಣಗೆರೆ ಚನ್ನಪ್ಪ. ಬಿ 9590829024 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.