ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಜುಲೈ 18 ರಿಂದ ಆಗಸ್ಟ್ 30 ರವರೆಗೆ ಸುವಿಧ ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ನಿಗಧಿಗೊಳಿಸಲಾಗಿತ್ತು.
ಆದರೆ ಸುವಿಧ ಪೋರ್ಟಲ್ ನಲ್ಲಿ ಹಲವಾರು ತಾಂತ್ರಿಕ ದೋಷಗಳಿರುವ ಕಾರಣ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರದ ಸೇವಾಸಿಂಧು (Sevasindhu) ಪೋರ್ಟಲ್- https:// sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08192-233309 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.